ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಳಗಡೆ ಸಾಧಾರಣ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಭಾನುವಾರ ಬೆಳಿಗ್ಗೆ ಚಂಡಮಾರುತವಾಗಿ ಪರಿವರ್ತನೆಯಾಗಿದೆ. ಈ ಚಂಡಮಾರುತಕ್ಕೆ ಮೈಚುಂಗ್ ಎಂದು ಹೆಸರಿಡಲಾಗಿದೆ. ಮೈಚುಂಗ್ ಚಂಡಮಾರುತದ ಪ್ರಭಾವ ರಾಜ್ಯದ ಮೇಲೆ ಹೆಚ್ಚಾಗಿ ಇರುವುದಿಲ್ಲ. ಹೀಗಾಗಿ ಮಳೆ ಮುನ್ಸೂಚನೆ ಇಲ್ಲ. ಆದರೆ, ದಕ್ಷಿಣ ಒಳನಾಡು ಸೇರಿ ಕೆಲವು ಕಡೆ ಸಾಧಾರಣ ಮಳೆಯಾಗುವ ಸಂಭವ ಇದೆ.
ಸೋಮವಾರ ಉತ್ತರ ಒಳನಾಡಿನ ಕಲಬುರಗಿ, ಬೀದರ್ ಸೇರಿ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.