alex Certify Rain alert Karnataka : ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ಸೈಕ್ಲೋನ್ ಎಫೆಕ್ಟ್ : ರಾಜ್ಯದ ಈ ಜಿಲ್ಲೆಗಳಲ್ಲಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶ್ರೀಲಂಕಾದ ಪೂರ್ವ ಕರಾವಳಿ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವುಂಟಾದ ಹಿನ್ನೆಲೆಯಲ್ಲಿ ರಾಜ್ಯದ ಮೇಲೂ ಪರಿಣಾಮ ಬೀರಲಿದೆ. ಚಾಮರಾಜನಗರ, ಮೈಸೂರು, ಕೊಡಗು, ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಂಜುಕವಿದ ವಾತಾವರಣವಿರಲಿದೆ.

ಚಿಕ್ಕಬಳ್ಳಪೌರ, ರಾಮನಗರ, ಚಮಾರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಡುಇನ ಕೆಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕಲಬುರಗಿ, ಬೀದರ್, ಬಾಗಲಕೋಟೆ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಂಜುಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...