ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೆಮಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ.
ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೆಮಲ್ ಚಂಡಮಾರುತ ಮಳೆಯ ಮಾರುತಗಳನ್ನು ಸೆಳೆಯುತ್ತಿರುವುದರಿಂದ ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆ ಮುಂದುವರಿಯಲಿದೆ. ಮುಂದಿನ ಮೂರು ದಿನಗಳ ಕಾಲ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 1ರಿಂದ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.