ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಭಾನುವಾರ ತೀವ್ರವಾಗಿ ಸ್ವರೂಪಕ್ಕೆ ತಿರುಗಲಿದ್ದು, ಸೋಮವಾರ ಮತ್ತು ಮಂಗಳವಾರ ಚಂಡಮಾರುತವಾಗಿ ರೂಪುಗೊಳ್ಳಲಿದೆ. ಬಂಗಾಳ ಕೊಲ್ಲಿಯ ಕರಾವಳಿ ಸಮೀಪಕ್ಕೆ ಬಂದು ಚಂಡಮಾರುತವಾಗಿ ಪರಿವರ್ತನೆ ಆಗುವುದರಿಂದ ತೀವ್ರತೆ ಕಡಿಮೆ ಇದೆ. ಪೂರ್ವ ಕರಾವಳಿಯಲ್ಲಿ ಚಂಡಮಾರುತ ಚಲಿಸಲಿದೆ. ತಮಿಳುನಾಡು, ಆಂಧ್ರಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತದೆ. ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಗೆ ಹೊಂದಿಕೊಂಡ ಕೆಲವು ಭಾಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.