ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟದಿಂದ ಮನೆಗಳು ಛಿದ್ರವಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿಯ ಆನಂದ ಥಿಯೇಟರ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದಾರೆ. ನಜೀರ್, ಅವರ ಪತ್ನಿ ಕಲ್ಸುಮ್, ಇಬ್ಬರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ 11.30ರ ಸುಮಾರಿಗೆ ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಸೋರಿಕೆಯಾಗಿದ್ದು, ಭೀಕರ ಸ್ಫೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.