ಕಲಬುರಗಿ: ಸೀಮಂತ ಕಾರ್ಯಕ್ರಮದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೂವರು ಸಾವು ಕಂಡಿದ್ದಾರೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟಗೊಂಡು 17 ಮಂದಿ ಗಾಯಗೊಂಡಿದ್ದರು. ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ನಿವೃತ್ತ ನೌಕರ ಸಾಹೇಬಗೌಡ ಅವರ ಮನೆಯಲ್ಲಿ ಸೊಸೆಯ ಸೀಮಂತ ಕಾರ್ಯಕ್ರಮದ ಅಂಗವಾಗಿ ಅಡುಗೆ ಮಾಡುವಾಗ ಸಿಲಿಂಡರ್ ಸೋರಿಕೆಯಿಂದಾಗಿ 12 ಮಕ್ಕಳು ಸೇರಿದಂತೆ 17 ಮಂದಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು. ಜಿಲ್ಲಾಧಿಕಾರಿ ರಾಗಪ್ರಿಯಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದು, 5 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.