
ಯಾದಗಿರಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14 ಕ್ಕೇ ಏರಿಕೆಯಾಗಿದೆ. ಫೆಬ್ರವರಿ 25 ರಂದು ಸಿಲಿಂಡರ್ ಸ್ಪೋಟ ಸಂಭವಿಸಿತ್ತು.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟವಾಗಿತ್ತು. ಕಲ್ಬುರ್ಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಂಗಲಾ(50, ಈರಣ್ಣ(50), ನಾಗಣ್ಣ(47) ಮೃತಪಟ್ಟಿದ್ದಾರೆ.
ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ 10 ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.