ಹಾಸನ: ಅಡುಗೆ ಮಾಡುವಾಗ ಗ್ಯಾಸ್ ಲೀಕ್ ಆಗಿ ಸ್ಟೌವ್ ಸ್ಫೋಟಗೊಂಡು ಮುವರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ನಡೆದಿದೆ.
ಮೀನಾಕ್ಷಿ, ಮಂಗಳಾ, ರಾಧಾ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಪಟೇಲ್ ರಾಮೇಗೌಡ ಎಂಬುವವರ ಮನೆಯಲ್ಲಿ ಸಿಹಿ ತಿಂಡಿ ತಯಾರಿಸುತ್ತಿದ್ದ ವೇಳೆ ಗ್ಯಾಸ್ ಲೀಕ್ ಆಗಿ ಈ ಅವಘಡ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ,ಅನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿವೆ. ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಗಾಯಾಳುಗಳನ್ನು ಅರಕಲಗೂಡು ಆಸ್ಪತ್ರೆಗೆ ದಾಖಲಿಸಲಾಗಿದೆ.