
ಮೈಸೂರು: ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ.
ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದ್ದು, ಒಂದೇ ಮನೆಯ ನಾಲ್ವರು ಮತ್ತು ಪಕ್ಕದ ಮನೆಯ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.