
ಹುಬ್ಬಳ್ಳಿ: ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್ ಹೌಸ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
26 ವರ್ಷದ ಸುಭಾಷ್ ಮೋಹನ್ ರಾಮ್ ಮೃತ ದುರ್ದೈವಿ. ರಾಜಸ್ಥಾನದ ಜೋಧ್ ಪುರ ಮೂಲದವರು. ಅಡುಗೆ ಅನಿಲ ಸೋರಿಕೆಯಿಂದಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಸುಭಾಷ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಭಾಷ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ತಮ್ಮ ಊರಿಗೆ ವಾಪಾಸ್ ಆಗಿದ್ದಾರೆ.