
ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ.
ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ ಮಹಾರಾಷ್ಟ್ರದ ಬಿಡ್ ಮೂಲದ ಸೂರ್ಯಕಾಂತ ಸೆಳಕೆ (55) ಮೃತಪಟ್ಟಿದ್ದಾರೆ. ಗಾಯಾಳು ಜ್ಞಾನೋದಯನಿಗೆ ಚಿಕ್ಕೋಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಲಿಂಡರ್ ಸ್ಫೋಟದ ತೀವ್ರತೆಗೆ ಪಕ್ಕದ ಮನೆ ಗೋಡೆ ಕುಸಿದಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.