ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡ ದುರಂತದಲ್ಲಿ ಮತ್ತೋರ್ವ ಗಾಯಾಳು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಲಿಂಗರಾಜು (19) ಮೃತ ಯುವಕ. ಭಾನುವಾರ ರಾತ್ರಿ ಹಳೇ ಹುಬ್ಬಳ್ಳಿಯ ಸಾಯಿನಗರ ಈಶ್ವರ ದೇವಸ್ಥಾನ ಬಳಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದರು.
ಇಂದು ಬೆಳಿಗ್ಗೆ ಓರ್ವ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ. ಇದರ ಬೆನ್ನಲ್ಲೇ ಇದೀಗ 19 ವರ್ಷದ ಲಿಂಗರಾಜು ಎಂಬ ಗಾಯಾಳು ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಸಿಲಿಂಡರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಮೃತ ನಾಲ್ವರು ಶೇ.70ಕ್ಕಿಂತ ಹೆಚ್ಚು ಸುಟ್ಟಗಾಯಗಳಿಂದ ಬಳಲುತ್ತಿದ್ದರು. ಇನ್ನು ಐವರು ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.