
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ.
ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ನೇಪಾಳ ಮೂಲದ ಮದನ್ ಚೌಹಾರ್, ಪತ್ನಿ ಪ್ರೇಮ್ ಜಾಲ, ಮಕ್ಕಳಾದ ಹಿರದ್, ಪ್ರಶಾಂತ್, ಅನಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.