
ಚಾಮರಾಜನಗರ: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಗಾಗಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಚಾಮರಾಜನಗರ ಕೊಳದ ಬೀದಿಯ ಆಂಜನೇಯ ದೇವಾಲಯದ ಬಳಿ ನಡೆದಿದೆ.
ಮನೆಯಲ್ಲಿದ್ದ ಅಂಬಿಕಾ(35), ವಿಶ್ವನಾಥ(45), ಮಕ್ಕಳಾದ ಶಕ್ತಿ(3), ವಿವೇಕ್(10), ರೋಹಿಣಿ(12) ಅವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿದ್ದ ಧವಸ, ಧಾನ್ಯ, ಬಟ್ಟೆ, ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಾಮರಾಜನಗರ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.