
ಕಾರವಾರ: ಗ್ಯಾಸ್ ಸಿಲಿಂಡರ್ ತುಂಬಿಕೊಂಡು ತೆರಳುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಹೊಡೆದು ಚಾಲಕ ಲಾರಿಯಲ್ಲೇ ಸಿಲುಕಿ ಪರದಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ನಡೆದಿದೆ.
ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಏಕಾಏಕಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಸಂಪುರ್ಣ ನುಜ್ಜುಗುಜ್ಜಾಗಿದೆ. ಲಾರಿ ಚಾಲಕ ಲಾರಿಯಲ್ಲೇ ಸಿಲುಕಿಕೊಂಡು ಪರದಾಡಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಲಾರಿ ಬಾಗಿಲು ಮುರಿದು ಚಾಲಕನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಸಿಲಿಂಡರ್ ಸೋರಿಕೆಯಾಗಿಲ್ಲ. ಲಾರಿ ಚಾಲಕ ವಿನಯಕ್ ಎಂಬುವವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರುಇಶೀಲನೆ ನಡೆಸಿದ್ದಾರೆ.