ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶಕ್ಕೆ ಪ್ರಯಾಣಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ವಿದೇಶ ಪ್ರವಾಸ ಕೈಗೊಂಡಿದ್ದಾರೆ.
ರಾಜಕೀಯ ಘಟಾನುಘಟಿ ನಾಯಕರು ವಿದೇಶದಲ್ಲಿ ಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ. ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತಾರಾಗಿ ಕೆನಡಾ, ಟರ್ಕಿ ಪ್ರವಾಸಕ್ಕೆ ತೆರಳಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಕುಟುಂಬ ಸದಸ್ಯರ ಜೊತೆಗೂಡಿ ವಿದೇಶ ಪ್ರವಾಸಕ್ಕೆ ತೆರಳಿದ್ದು, ಅಲ್ಲೇ ಹೊಸ ವರ್ಷ ಸ್ವಾಗತಿಸಲಿದ್ದಾರೆ.
ಇನ್ನು ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗೋವಾ ಪ್ರವಾಸದಲ್ಲಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಗೋವಾಗೆ ತೆರಳಿದ್ದು, ಈ ಬಾರಿ ಗೋವಾದಲ್ಲೇ ಹೊಸ ವರ್ಷಾಚರಣೆ ಮಾಡುತ್ತಿದ್ದಾರೆ.