ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸಿಬಿಐ ಮನವಿ ಮಾಡುವ ಸಾಧ್ಯತೆ ಇದೆ.
ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ನಡೆಯಲಿದೆ.
ಸಿಬಿಐ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಬಿಐಗೆ ಅರ್ಜಿ ಸಲ್ಲಿಸುವ ಹಕ್ಕಿದೆ. ನಾವು ಕೂಡ ಕೋರ್ಟ್ ನಲ್ಲಿ ವಾದ ಮಂಡಿಸುತ್ತೇವೆ. ನಮಗೆ ನ್ಯಾಯಾಲಯದ ಮೇಲೆ ಗೌರವವಿದೆ ಎಂದಿದ್ದಾರೆ.