ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಇದೀಗ ಡಿ.ಕೆ.ಶಿವಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಡಿ.ಕೆ.ಶಿವಕುಮಾರ್ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದಾರೆ. ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಹಿಂಪಡೆಯುವನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡಿದ್ದ ನಿರ್ಧಾರ ಪ್ರಶ್ನಿಸಿ ಶಾಸಕ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಸರ್ಕಾರ ಹಾಗೂ ಸಿಬಿಐ ನಡುವಿನ ವಾದವನ್ನು ಹೈಕೋರ್ಟ್ ನಡೆಸುವುದಕ್ಕಿಂತ ಸುಪ್ರೀಂ ಕೋರ್ಟ್ ನಲ್ಲಿ ನಡೆಯುವುದು ಸೂಕ್ತ ಎಂದು ಅರ್ಜಿ ವಜಾಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಕೇವಿಯಟ್ ಸಲ್ಲಿಸಿದ್ದಾರೆ.