ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಲೆಕ್ಕದ ತಪ್ಪು ಮಾಹಿತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ಕಾರದ ವಿರುದ್ಧ ದೂರಿದ್ದಾರೆ.
ಕೊರೋನಾದಿಂದ ರಾಜ್ಯದಲ್ಲಿ 34 ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ಹೇಳಿದೆ. ಆದರೆ, ರಾಜ್ಯದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೂರು ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಬಗ್ಗೆ ಸರ್ಕಾರಿ ವೆಬ್ ಸೈಟ್ ಗಳಲ್ಲಿ ಮಾಹಿತಿ ಇದ್ದು, ಈ ಅಂಕಿ-ಅಂಶಗಳನ್ನು ಸರ್ಕಾರವೇ ತೆಗೆದು ಹಾಕಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಲಿದ್ದು, ಕೋವಿಡ್ ನಿಂದ ನೊಂದವರಿಗೆ ನ್ಯಾಯ ಕೊಡಿಸುತ್ತೇವೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಭೆಯಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಕುರಿತಂತೆ ಚರ್ಚೆ ನಡೆದಿಲ್ಲ. ನಾನು ನಾಳೆ ಚಾಮರಾಜನಗರಕ್ಕೆ ಹೋಗುತ್ತಿದ್ದೇನೆ. ಆಕ್ಸಿಜನ್ ಸಿಗದೆ ಮೃತಪಟ್ಟ ಕುಟುಂಬದವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ.