ಬೆಂಗಳೂರು: ಮಾಜಿ ಸಿಎಂ ಡಿ.ವಿ.ಸದಾನಾಂದಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಗಾಗಿ ಭಾರಿ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ವರಿಷ್ಠರು ಸದಾನಂದಗೌಡಗೆ ಈ ಬಾರಿ ಟಿಕೆಟ್ ನೀಡುತ್ತಾರೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಮಧ್ಯೆ ಸದಾನಂದಗೌಡ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಹಲವು ಬಿಜೆಪಿ ನಾಯಕರು ನಮ್ಮನ್ನು ಭೇಟಿಯಾಗಿದ್ದಾರೆ ಎಂದಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹಾಲಿ ಬಿಜೆಪಿ ಸಂಸದರು ಕೂಡ ನಮ್ಮನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈಗ ಅವರ ಹೆಸರನ್ನು ಬಹಿರಂಗಪಡಿಸಲ್ಲ. ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದರು.
ಇನ್ನು ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾರ್ಚ್ 15ಕ್ಕೆ ಬಿಡುಗಡೆಯಾಗಲಿದೆ. ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆ ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.