ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ವೇಳೆ ಆರ್.ಆರ್. ನಗರ ಪಾರ್ಟ್ ಮೆಂಟ್ ವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಮತದಾರರಿಗೆ ಲಂಚ ಹಾಗೂ ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಆರೋಪದಡಿಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.