alex Certify BIG NEWS: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರ ಮತಯಾಚನೆ ವೇಳೆ ಆರ್.ಆರ್. ನಗರ ಪಾರ್ಟ್ ಮೆಂಟ್ ವೊಂದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಮತದಾರರಿಗೆ ಲಂಚ ಹಾಗೂ ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಆರೋಪದಡಿಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...