ಕುಮಾರಸ್ವಾಮಿ ರಾಜಕೀಯ ಬಿಟ್ಟು ರಾಜ್ಯದ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮರಸ್ವಾಮಿಯವರಿಗೆ ಪ್ರಧಾನಿ ಮೋದಿ ಒಳ್ಳೆ ಖಾತೆ ಕೊಟ್ಟಿದ್ದಾರೆ. ಇರುವ ಅವಕಾಶವನ್ನು ಅವರು ಚನ್ನಾಗಿ ಉಪಯೋಗಿಸಿಕೊಂಡು ರಾಜ್ಯದ ಜನಗೆ ಉದ್ಯೋಗ ನೀಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕುಮಾರಸ್ವಾಮಿ ಅವರು ರಾಜಕಾರಣ, ಬೇರೆ ಮಾತು ಎಲ್ಲವನ್ನು ಬಿಟ್ಟು ರಾಜ್ಯದಲ್ಲಿ 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಕೂಡ ಅವರಿಗೆ ಬೇಕಾದಂತಹ ಸಹಕಾರ ನೀಡುತ್ತದೆ ಎಂದರು.

ಕುಮಾರಸ್ವಾಮಿಯವರಿಗೆ ಮೋದಿ ಅವರು ಉಕ್ಕು, ಕೈಗಾರಿಕೆ ಎನ್ನುವ ದೊಡ್ಡ ಹಾಗೂ ಉತ್ತಮ ಖಾತೆ ಕೊಟ್ಟಿದ್ದಾರೆ. ಅವರಿಗೆ ಸಿಕ್ಕಿರುವ ಒಳ್ಳೇ ಅವಕಾಶ ಬಳಸಿಕೊಳ್ಳಲಿ. ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ… ಅನಗತ್ಯ ಮಾತುಗಳನ್ನು ಆಡಿ ಯಾಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದರು.

ಎಡಿಜಿಪಿ ಚಂದ್ರಶೇಖರ್ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ವಿಚಾರವಾಗಿ ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಇವರು. ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read