alex Certify BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸಿಬಿಐ ಸಲ್ಲಿಸಿರುವ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಅರ್ಹವಾಗಿಲ್ಲ. ರಾಜ್ಯ-ಸಿಬಿಐ ನಡುವಿನ ವಾದವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹಾಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಈ ಮೂಲಕ ಆದಾಯ ಮೀರಿ ಆಸ್ತಿಗಳಿಕೆ ಕೇಸ್ ನಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಸಿಬಿಐ ಮುಂದಿನ ನಡೆ ಕಾದುನೋಡಬೇಕಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...