alex Certify BIG NEWS: ಅಕ್ರಮ ಕಟ್ಟಡ ನಿರ್ಮಾಣ ಪತ್ತೆಗೆ ಬರಲಿದೆ AI ತಂತ್ರಜ್ಞಾನ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಕಟ್ಟಡ ನಿರ್ಮಾಣ ಪತ್ತೆಗೆ ಬರಲಿದೆ AI ತಂತ್ರಜ್ಞಾನ!

ಬೆಂಗಳೂರು: ಇನ್ಮುಂದೆ ಅಕ್ರಮ ಕಟ್ಟಡಗಳ ನಿರ್ಮಾಣ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಎಐ ಮೂಲಕ ಅಕ್ರಮ ಕಟ್ಟಡ ನಿರ್ಮಾಣಗಳ ಪತ್ತೆ ಮಾಡಲಾಗುವುದು ಎಂದರು.

ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು. ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ. ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ. ಇಂತಹ ಅಕ್ರಮಗಳನ್ನು ‘ಎಐʼ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು. ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ಹೇಳಿದರು.

ಬೀದಿಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ, ಮನೆ ಬಾಗಿಲಿಗೆ ತೆರಳಿ ಖಾತೆ ವಿತರಣೆ ವ್ಯವಸ್ಥೆ ಜಾರಿಗೆ ಬರಲಿದೆ.

ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು ಎಂದರು.

ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ ಎಂದು ತಿಳಿಸಿದರು.

ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ. 50 ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಶಾಸಕರು ನೀಡಿದ್ದಾರೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...