
ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಇದೇ ವಿಚಾರ ರಾಜ್ಯಸಭೆಯಲ್ಲಿಯೂ ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತಾಪಿಸಿ ಕೇಂದ್ರ ಸಂಸದೀಯ ವ್ಯವಹರಗಳ ಸಚಿವ ಕಿರಣ್ ರಿಜುಜು ಸದನದ ದಾರಿ ತಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಸದನದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್ ಕಿರಣ್ ರಿಜುಜು ಅವರಿಗೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.
ರಾಜ್ಯಸಭೆಯ ವ್ಯವಹಾರಗಳ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 188ರ ಅಡಿ ಈ ನೋಟಿಸ್ ನೀಡಲಾಗಿದೆ. ಡಿ.ಕೆ.ಶಿವಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಹೇಳಿಕೆಗಳನ್ನು ರಿಜುಜು ನೀಡುತ್ತಿದ್ದು, ಈ ಮೂಲಕ ಸದನದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಜೈರಾಮ್ ರಮೇಶ್, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ಅವರಿಗೆ ಸಲ್ಲಿಸಿದ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಈ ಮೂಲಕ ಕಿರಣ್ ರಿಜುಜು ವಿರುದ್ಧ ಹಕ್ಕುಚ್ಯುತಿ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ನೋಟಿಸ್ ನಲ್ಲಿ ತಿಳಿಸಿದ್ದಾರೆ.