alex Certify ಮಾನವೀಯತೆ ಮೆರೆದ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಡಿಕೆಶಿ

ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾನವೀಯತೆ ತೋರಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ನ ಚಿಕ್ಕಕೆರೆ ಸಮೀಪ ನಡೆದ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಡಿ.ಕೆ. ಶಿವಕುಮಾರ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಕಾರ್ಯಕ್ರಮ ನಿಮಿತ್ತ ಹುಲಿಯೂರು ದುರ್ಗದ ಕಡೆಗೆ  ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ವೇಳೆ ಚಿಕ್ಕಕೆರೆ ಸಮೀಪ ಬೈಕ್ ನಿಂದ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಇದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ತಕ್ಷಣ ಕಾರ್ ನಿಂದ ಇಳಿದು, ಗಾಯಾಳು ಉಪಚರಿಸಿ ತಮ್ಮದೇ ಕಾರ್ ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಡಿಕೆಶಿ ಅವರ ಕಾರ್ಯಕ್ಕೆ ಸ್ಥಳದಲ್ಲಿದ್ದ ಶಾಸಕ ರಂಗನಾಥ್ ಸಾಥ್ ನೀಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...