ಚನ್ನೈ: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಒಂದೆಡೆ ಸಚಿವರ ಡಿನ್ನರ್ ಪಾಲಿಟಿಕ್ಸ್ ಚರ್ಚೆ ಜೋರಾಗಿದ್ದರೆ ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಆಂತರಿಕ ಕಲಹ ಶುರುವಾದಂತಿದೆ. ಈ ಎಲ್ಲಾ ಬೆಳವಣಿಗೆ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಎಂಪಲ್ ರನ್ ಆರಂಭಿಸಿದ್ದಾರೆ.
ತಮಿಳುನಾಡಿನ ಪ್ರಸಿದ್ಧ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದಾರೆ. ಕುಂಬಕೋಣಂನಲ್ಲಿರುವ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿರುವ ಡಿ.ಕೆ.ಶಿವಕುಮಾರ್, ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಕಾಂಚಿಪುರಂನ ವರದರಾಜು ಪೆರುಮಾಳ್ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.
ತಮಿಳುನಾಡಿನ ಕುಂಭಕೊಂಣಂಗೆ ಆಗಮಿಸಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ಥಳೀಯ ಮೇಯರ್ ಶರವಣನ್, ತಂಜಾವೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲೋಕನಾಥನ್, ಕಾಂಗ್ರೆಸ್ ಮುಖಂಡರಾದ ಕೃಷ್ಣಸ್ವಾಮಿ, ವೆಂಕಟೇಶ್ ಮತ್ತಿತರರು ಬರಮಾಡಿಕೊಂಡರು.