alex Certify ರಾಜಕೀಯ ಗುರು, ಮಾಜಿ ಸಿಎಂ ಎಸ್.ಎಂ ಕೃಷ್ಣ ಆಶೀರ್ವಾದ ಪಡೆದ ನೂತನ ಡಿಸಿಎಂ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ಗುರು, ಮಾಜಿ ಸಿಎಂ ಎಸ್.ಎಂ ಕೃಷ್ಣ ಆಶೀರ್ವಾದ ಪಡೆದ ನೂತನ ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಮಾಜಿ ಮುಖ್ಯಮಂತ್ರಿ – ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಭೇಟಿ ವೇಳೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನೂತನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಲು ಹೊದಿಸಿ , ಹಾರ ಹಾಕಿ ಪುಸ್ತಕ ನೀಡಿ ಶುಭಕೋರಿದ್ದಾರೆ.

ರಾಜಕೀಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಎಸ್ ಎಂ ಕೃಷ್ಣ ಗುರು ಎಂದೇ ಪರಿಗಣಿಸಲಾಗಿದೆ. ರಾಜಕೀಯವನ್ನು ಮೀರಿ ಅವರಿಬ್ಬರು ಸಂಬಂಧಿಕರಾಗಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಮಗಳು ಐಶ್ವರ್ಯಾ ಎಸ್.ಎಂ. ಕೃಷ್ಣ ಮೊಮ್ಮಗನೊಂದಿಗೆ ವಿವಾಹವಾಗಿದ್ದಾರೆ.
ಕಾಂಗ್ರೆಸ್ ನಲ್ಲಿ 50 ವರ್ಷಗಳ ಕಾಲ ಇದ್ದ ಎಸ್ ಎಂ ಕೃಷ್ಣ ರವರು 2017 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...