ಬೆಂಗಳೂರು: ಒಂದೆಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಆರಂಭವಾಗಿದೆ. ಇನ್ನೊಂದೆಡೆ ಇಡಿ ಸಂಕಷ್ಟಗಳು ಶುರುವಾಗುವ ಸಾಧ್ಯತೆ ಇದೆ. ಈ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಸ್ಥಾನದ ಆಕಾಂಕ್ಷಿಗಳು ಪದೇ ಪದೇ ಭೇಟಿಯಾಗಿ ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದಾರೆ. ಗೃಹ ಸಚಿವರ ನಿವಾಸಕ್ಕೆ ಭೇಟಿ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಚರ್ಚೆ ನಡೆಸಿದ್ದಾರೆ. ಇಬ್ಬರು ನಾಯಕರ ಮಾತುಕತೆ ತೀವ್ರ ಕುತೂಹಲ ಮೂಡಿಸಿದೆ.
ಎತ್ತಿನಹೊಳೆ ಯೋಜನೆ ವಿಚಾರವಾಗಿ ಗೃಹ ಸಚಿವರನ್ನು ಭೇಟಿಯಾಗುತ್ತಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆದರೆ ಎತ್ತಿನಹೊಳೆ ನೆಪದಲ್ಲಿ ರಾಜ್ಯ ರಾಜಕೀಯ ಬೆಳವಣಿಗಳ ಬಗ್ಗೆ ಚರ್ಚೆ ನಿಟ್ಟಿನಲ್ಲಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.