BIG NEWS: ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯಿಂದ ಹುನ್ನಾರ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಯೇ ಇದೆ. ಬಿಜೆಪಿಯವರು ಅನಗತ್ಯವಾಗಿ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಹತ್ಯೆ ಪ್ರಕರಣದ ಬಗ್ಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ನಯಕರ ಆರೋಪಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ, ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ ಎಂದು ಹೇಳಿದರು.

ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿಯವರು ಈ ರೀತಿಯ ನಾಟಕ ಹಾಗೂ ಹುನ್ನಾರ ನಡೆಸುತ್ತಿದ್ದಾರೆ. ಆ ರೀತಿ ಆಗಲು ನಾವು ಬಿಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತವಾಗಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕರ್ನಾಟಕ ಬಿಹಾರ ಆಗುತ್ತದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಅವರ ಕಾಲದಲ್ಲಿಯೂ ಅನೇಕ ಕೃತ್ಯಗಳು ನಡೆದಿದ್ದವು. ಎಲ್ಲರ ಕಾಲದಲ್ಲೂ ವೈಯಕ್ತಿಕ ಕಾರಣಗಳಿಗೆ ಇವು ನಡೆಯುತ್ತಿರುತ್ತವೆ. ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ತಮ್ಮ ಕೆಲಸ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read