alex Certify BIG NEWS: ಕಾಂಗ್ರೆಸ್ ಶಕ್ತಿ ಬಗ್ಗೆ ನಮಗೂ ಗೊತ್ತು; ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತು: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಶಕ್ತಿ ಬಗ್ಗೆ ನಮಗೂ ಗೊತ್ತು; ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತು: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಳಗಾವಿ: ಕಾಂಗ್ರೆಸ್ ಪಕ್ಷದ ಶಕ್ತಿ ಏನೆಂದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಬೆಳಗಾವಿ ಚಲೋ ಬಗ್ಗೆ ಪ್ರತಿಕ್ರಿಯಿಸಿ, ಈಗ ಆ ಮಾತು ಏಕೆ? ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಯಾರಾದರೂ ಕೆಡಿಸುವ ಪ್ರಯತ್ನ ಮಾಡಲಿ. ಕಾಂಗ್ರೆಸ್ ಪಕ್ಷದ ಶಕ್ತಿ ಅವರಿಗೂ ಗೊತ್ತಿದೆ. ನಮಗೂ ಗೊತ್ತಿದೆ. ಮೊದಲು ಐತಿಹಾಸಿಕ ಕಾರ್ಯಕ್ರಮ ಮಾಡುವ ಮೂಲಕ ಇತಿಹಾಸದ ಪುಟ ಸೇರೋಣ ಎಂದರು.

ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ಹೀಗಾಗಿ ಬೆಳಗಾವಿಯಲ್ಲಿ ದೀಪಾಲಂಕಾರ ಮಾಡಲಾಗಿದೆ. ಸಾರ್ವಜನಿಕರು ಈ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ತಿಳಿಸಿದರು.

ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಈ ಕಾರ್ಯಕ್ರಮವನ್ನು ಪಕ್ಷದ ದೃಷ್ಟಿಯಿಂದ ನೋಡಬೇಡಿ. ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ಮಾಡಿದರು, ಪಕ್ಷದ ಕಾರ್ಯಕ್ರಮವನ್ನಾಗಿ ಮಾಡುವುದಿಲ್ಲ. ದೇಶದ ಇತಿಹಾಸ ಹಾಗೂ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎನ್ನುವುದನ್ನು ಗಮನದಲ್ಲಿಟ್ಟು ಕೊಂಡು ಕಾರ್ಯಕ್ರಮ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡುತ್ತೇನೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಯಕರು ಎಂದು ಎನಿಸಿಕೊಂಡವರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಜನರನ್ನು ಕರೆತನ್ನಿ ಎಂದು ಹೇಳುವುದಿಲ್ಲ. ನೂರು ಜನರನ್ನು ಕರೆದುಕೊಂಡು ಬಂದರೂ ಸಾಕು. ಡಿ.26ರಿಂದ ಅಧಿಕೃತ ಕಾರ್ಯಕ್ರಮ ಆರಂಭವಾಗಲಿದೆ. 26ರಂದು ಬೆಳಗ್ಗೆ ಕೆಲವು ಸ್ಥಳಗಳಲ್ಲಿ ಉದ್ಘಾಟನಾ ಕಾರ್ಯಕ್ರಮಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. 27ರಂದು ಬೆಳಗ್ಗೆ 10.30ಕ್ಕೆ ಸರ್ಕಾರದ ವತಿಯಿಂದ ಸುವರ್ಣಸೌಧ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡಲಾಗುವುದು. ಅಂದು ಸುವರ್ಣ ಸೌಧದಲ್ಲಿ ಫೋಟೋ ಸೆಷನ್, ಭೋಜನ ಕೂಟವಿದೆ. 27ರಂದು ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ವಿವರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...