alex Certify ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲು ಸಾಲು ಹಗರಣ: ಎಲ್ಲವನ್ನೂ ದಾಖಲೆ ಸಮೇತ ಸದನದಲ್ಲಿ ಬಯಲು ಮಾಡುತ್ತೇವೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಸಾಲು ಸಾಲು ಹಗರಣ: ಎಲ್ಲವನ್ನೂ ದಾಖಲೆ ಸಮೇತ ಸದನದಲ್ಲಿ ಬಯಲು ಮಾಡುತ್ತೇವೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯವರಿಗೆ ತಮ್ಮ ಅವಧಿಯಲ್ಲಿನ ಹಗರಣ ಬಯಲಿಗೆ ಬರುವ ಭೀತಿ. ಹಾಗಾಗಿ ಸದನದಲ್ಲಿ ಗಲಾಟೆ ಮಾಡಿ ಸುಗಮ ಕಲಾಪಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳಲ್ಲಿ ಹಗರಣ ನಡೆದಿದೆ. ಸುಮಾರು 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದರು.

ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಸಿಎಂ ಹುದ್ದೆಗೆ ₹2500 ಕೋಟಿ, ಮಂತ್ರಿ ಸ್ಥಾನಕ್ಕೆ ₹100 ಕೋಟಿ ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ ಎಂದು ಪ್ರಶ್ನಿಸಿದರು.

ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ. ವಾಲ್ಮೀಕಿ ನಿಗಮದ ₹86 ಕೋಟಿ ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ತನಿಖೆ ಮುಂದುವರೆದಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...