alex Certify BIG NEWS: ‘ಚೊಂಬು’ ಜಾಹೀರಾತನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯವರು ‘ಪಿಕ್ ಪಾಕೇಟ್’ ಆರೋಪ ಮಾಡುತ್ತಿದ್ದಾರೆ; ಡಿಸಿಎಂ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಚೊಂಬು’ ಜಾಹೀರಾತನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯವರು ‘ಪಿಕ್ ಪಾಕೇಟ್’ ಆರೋಪ ಮಾಡುತ್ತಿದ್ದಾರೆ; ಡಿಸಿಎಂ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಕಾಂಗ್ರೆಸ್ ವಿರುದ್ಧ ಪಿಕ್ ಪಾಕೇಟ್ ಜಾಹೀರಾತು ನೀಡಿರುವ ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವು ನೀಡಿರುವ ಚೊಂಬಿನ ಜಾಹೀರಾತನ್ನು ಅರಗಿಸಿಕೊಳ್ಳಲಾಗದೇ ಬಿಜೆಪಿಯವರು ಪಿಕ್ ಪಾಕೇಟ್ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಾವು ಪಿಕ್ ಪಾಕೇಟ್ ಮಾಡಿದ್ದೇವೆ ಎಂದು ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿಯವರು ತಾವು ಮಾಡಿದ ಪಿಕ್ ಪಾಕೇಟ್ ನ್ನು ನಮ್ಮ ಮೇಲೆ ಹಾಕುತ್ತಿದ್ದಾರೆ. ನಾವು ನೀಡಿರುವ ಚೊಂಬು ಜಾಹೀರಾತನ್ನು ಅವರಿಗೆ ಅರಗಿಸಿಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಅದಕ್ಕೆ ಈ ರೀತಿ ಸುಳ್ಳು ಹೇಳುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ಬರ ಪರಿಹಾರಕ್ಕಾಗಿ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಅಲ್ಲಿ ನಮಗೆ ಜಯವಾಗಿದೆ. ಬರ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ನಮಗೆ ಪರಿಹಾರ ಶೀಘ್ರ ಸಿಗಲಿದೆ. ಅದಕ್ಕಾಗಿ ಸಾಂಕೇತಿಕ ಹೋರಾಟವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...