ಉಡುಪಿ: ಬಿಪಿಎಲ್ ಕಾರ್ಡ್ ದಾರರು ಆತಂಕ ಪಡುವ ಅಗತ್ಯವಿಲ್ಲ. ಅರ್ಹ ಬಿಪಿಎಲ್ ಕಾರ್ಡ್ ದಾರರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ ಎಂದಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಪಿಎಲ್ ಕಾರ್ಡ್ ನವರಿಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ ಎಂದರು.
ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ ಎಂದರು.