BIG NEWS: ಮೇ 7 ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಹಿನ್ನೆಲೆ ಯಾರು? ನಾವು ಹೇಳಬೇಕಾ; HDK ಹೇಳಿಕೆಗೆ ಡಿಸಿಎಂ ತಿರುಗೇಟು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೇ 7 ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, ’ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ’ ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್ ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಅವರು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದರು.

ಪೆನ್ ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ಗಮನಿಸಿ. ಈಗ ಪೆನ್ ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಅವರು ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read