ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಸಮಾವೇಶದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಈ ಸಮಾವೇಶಕ್ಕೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದು, ಕಾಂಗ್ರೆಸ್ ನಾಯಕರು ಬೆಳಗಾವಿಗೆ ಬಂದು ಸರ್ಕಾರದ ದುಡ್ಡಲ್ಲಿ ಜಾತ್ರೆ ಮಡುತ್ತಿದ್ದಾರೆ. ಜೈ ಬಾಪು, ಜೈ ಭೀಮ್ ಸಮಾವೇಶವೆಂದು ಹೇಳುತ್ತಿದ್ದಾರೆ. ಆದರೆ ಮಹಾತ್ಮಾ ಗಾಂಧೀಜಿಯವರ ಒಂದೇ ಒಂದು ಫೋಟೋ ಹಾಕಿಲ್ಲ. ಕೇವಲ ಕಂಗ್ರೆಸ್ ನಾಯಕರ ದೊಡ್ಡ ದೊಡ್ಡ ಫೋಟೋ, ಬ್ಯಾನರ್ ಗಳನ್ನು ಅಳವಡಿಸಿಕೊಂಡು ಹಣ ವ್ಯರ್ಥ ಮಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಶೆಟ್ಟರ್ ಬಂದರೆ ನಾನೇ ಅವರನ್ನು ಬೆಳಗವೈಯಲ್ಲಿ ಒಂದು ಟೂರ್ ಕರೆದುಕೊಂಡು ಹೋಗುತ್ತೇನೆ. ನಾವು ಎಲ್ಲೆಲ್ಲಿ ಏನು ಮಾಡಿದ್ದೇವೆ ಎಂಬುದನ್ನು ವಿವರಿಸುತ್ತೇನೆ ಎಂದು ಹೇಳಿದರು.
ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಬಂದಾಗ ಆಡಿದ ನುಡಿ ಮುತ್ತುಗಳನ್ನು ನೆನಪಿಸಿಕೊಳ್ಳಲಿ. ಗೌರವಾನ್ವಿತ ಲೋಕಸಭಾ ಸದಸ್ಯರಾಗಿರುವ ಶೆಟ್ಟರ್, ಬೆಳಗಾವಿಯಲ್ಲಿ ಎಲ್ಲೆಲ್ಲಿ ಏನೇನು ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದು ಟಾಂಗ್ ನೀಡಿದರು.