
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಭಿ ಜೋರಾಗಿದ್ದು, ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಹಾಗೂ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಡುವೆ ಪೈಪೋಟಿ ಆರಂಭವಾಗಿದೆ. ಈ ನಡುವೆ ದೆಹಲಿಗೆ ತೆರಳಿ ಹೈಕಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿರುವ ರಾಜಣ್ಣ, ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುವುದಾಗಿ ಹೇಳಿದ್ದರು.
ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ತನಗೆ ಕೊಟ್ಟರೆ ನಿಭಾಯಿಸುವುದಾಗಿ ಹೇಳಿರುವ ಸಚಿವ ರಾಜಣ್ಣ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಿಸಿಎಂ ನಿರಾಕರಿಸಿದ್ದು, ಸ್ಥಳದಿಂದ ತೆರಳಿದ್ದಾರೆ.