
ವಿಜಯಪುರ: ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲು ಮುಂದಾಗಿರುವ ‘ಒಂದು ದೇಶ ಒಂದು ಚುನಾವಣೆ’ ಮಸೂದೆಗೆ ಕಾಂಗ್ರೆಸ್ ವಿರೋಧವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಇದು ಸಣ್ಣ ಸಣ್ಣ ಪಕ್ಷಗಳನ್ನು, ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರವಾಗಿದೆ. ಒಂದು ದೇಶ, ಒಂದು ಚುನಾವಣೆಯನ್ನು ನಮ್ಮ ರಾಷ್ಟ್ರೀಯ ನಾಯಕರು ವಿರೋಧಿಸಿದ್ದಾರೆ. ಇದನ್ನು ಜಾರಿಗೆ ತರುವುದು ದಾಸ್ಸಾಧ್ಯ ಎಂದರು.
ಕೆಲ ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ. ಕೆಲವೆಡೆ ಚುನಾವಣೆ ನಡೆದು ಒಂದೂವರೆ, ಎರಡೂವರೆ ವರ್ಷವಾಗಿದೆ. ಈಗ ಈ ಮಸೂದೆ ತರುವ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.