ಬೆಂಗಳೂರು: ಎಂಪಿ ಚುನಾವಣೆಯಲ್ಲಿ ಅತಿಹೆಚ್ಚು ಸೀಟು ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯತೀಂದ್ರ ಸೂಕ್ಷ್ಮ ವ್ಯಕ್ತಿ, ಉದ್ಭವ ಆಗುತ್ತಿರುವ ನಾಯಕ. ಡಾ.ಯತೀಂದ್ರ ಅವರಿಗೆ ಸಹಕಾರ ಕೊಡೋಣ ಎಂದು ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಮ್ಮ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಸಿಎಂ, ನಾನು ಕೆಪಿಸಿಸಿ ಅಧ್ಯಕ್ಷ. ನಾವುಬ್ಬರೂ ಸೇರಿ ಒಟ್ಟಿಗೆ ಚುನಾವಣೆಯನ್ನು ಎದುರಿಸುತ್ತೇವೆ. ಸಿಎಂ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದರು.
ಆಸೆ ಪಡೋದು, ಹೇಳೋದು ಜನರಿಗೆ ಮನವಿ ಮಾಡೋದು ಸಾಮಾನ್ಯ. ನಾನೂ ನಮ್ಮೂರಿಗೆ ಹೋದಾಗ ನನಗೆ ಶಕ್ತಿ ಕೊಡಿ ಎಂದು ಕೇಳುತ್ತೇನೆ. ಅದು ಸ್ವಾಭಾವಿಕ. ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು? ಎಂದು ಹೇಳಿದರು.