ಬೆಂಗಳೂರು: ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಬಗ್ಗೆ ಇನ್ ಕಮ್ ಟ್ಯಾಕ್ಸ್ ಇಲಾಖೆಯಿಂದ ತನಿಖೆ ನಡೆಯಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕ ಯತ್ನಾಳ್, ಕೆಲವರು ಸಾವಿರದ ಇನ್ನೂರು ಕೋಟಿ ಇಟ್ಟುಕೊಂಡು ಕಾಯ್ತಿದ್ದಾರೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ. ಅಷ್ಟೊಂದು ಹಣ ಎಲ್ಲಿಂದ ಬಂತು? ಎಲ್ಲದರ ಬಗ್ಗೆ ಆದಾಯ ತೆರಿಗೆ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿ. ಈ ಬಗ್ಗೆ ನಾವು ಕೂಡ ನಮ್ಮ ಲೀಗಲ್ ಟೀಂ ಜೊತೆ ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಯತ್ನಾಳ್ ಹೇಳಿಕೆ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೂ ತಂದಿದ್ದೇನೆ. ಇದೇ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಕಾನೂನು ತಜ್ಞರ ಜೊತೆಯೂ ಚರ್ಚೆ ನಡೆಸುತ್ತೇವೆ. ಮುಂದಿನ ರೂಪುರೇಷೆ ಬಗ್ಗೆ ಸಭೆ ಬಳಿಕ ಹೇಳುತ್ತೇನೆ ಎಂದರು.