BIG NEWS: ಹೆಚ್.ಡಿ.ಕೆ ಪಿಕ್ ಪಾಕೆಟ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅವನಿಗೆ ಪಿಕ್ ಪಾಕೆಟ್ ಮಾಡಿ ರೂಡಿ ಅಲ್ಲವೇ? ಹಾಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರೆ,

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಮಾಧ್ಯಮಗೋಷ್ಠಿ ನಡೆಸಿ ನನ್ನ ವಿರುದ್ಧ ಟೀಕಿಸುತ್ತಿದ್ದಾರೆ. ಹೆದರಿಕೊಂಡು ಪಕ್ಕದ ಜಿಲ್ಲೆಗೆ ಹೋಗಿರುವ ಮಿಸ್ಟರ್ ಕುಮಾರಸ್ವಾಮಿ, ನೀನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ನವರು ದೇವೇಗೌಡರನ್ನ ಅಧಿಕಾರದಿಂದ ಇಳಿಸಿದ್ದರು ಎಂದು ಆರೋಪಿಸಿದ್ದಾರೆ. ಅವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಿಸಿದ್ದೇ ಕಾಂಗ್ರೆಸ್. ಅವರ ಎಲ್ಲ ಆರೋಪಗಳಿಗೆ ಉತ್ತರಿಸುತ್ತೇನೆ. ಅವರಿಗೆ ಸದನಕ್ಕೆ ಬರಲು ಹೇಳಿ ಎಂದರು.

ಮುಂದಿನ ಜನಾಂಗ ನೀವು ಎಂಥಹಾ ಸುಳ್ಳುಗಾರ ಎಂದು ನೋಡಬೇಕು. ಯಾವುದೇ ಆರೋಪಕ್ಕೂ ದಾಖಲೆ ಇರಬೇಕಲ್ಲವೇ? ಹೀಗಾಗಿ ನನ್ನ ಆಸ್ತಿ, ಅವರ ಆಸ್ತಿ ಬಗ್ಗೆ ಸದನದಲ್ಲಿ ಚರ್ಚಿಸಲು ನಾನು ಆಹ್ವಾನ ನೀಡಿದ್ದೆ. ಆತ ಸದನಕ್ಕೇ ಬರಲಿಲ್ಲ. ಅವರ ಕುಟುಂಬದ ಎಲ್ಲಾ ಸದಸ್ಯರ ಆಸ್ತಿ ಬೆಂಗಳೂರು ಸುತ್ತಾ ಮುತ್ತಾ ಎಷ್ಟಿತ್ತು ಎಂದು ನಾನು ದಾಖಲೆಗಳನ್ನು ತರುತ್ತೇನೆ. ನಾನು ಕಲ್ಲು ಒಡೆದಿದ್ದೇನೆಯೇ, ಲೂಟಿ ಮಾಡಿದ್ದೇನೆಯೇ ಎಂಬುದು ಸದನದಲ್ಲಿ ತೀರ್ಮಾನವಾಗಲಿ. ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುವುದರಲ್ಲಿ ಪ್ರಸಿದ್ಧಿ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read