ನನ್ನ ವಿರುದ್ಧ ಶತ್ರು ಭೈರವಿ ಯಾಗ ಮಾಡಿಸುತ್ತಿದ್ದಾರೆ. ಕೇರಳದ ದೇವಸ್ಥಾನವೊಂದರಲ್ಲಿ ನನ್ನ ಹಾಗೂ ಸಿಎಂ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ. ಪ್ರಾಣಿ ಬಲಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದರು. ಡಿ.ಕೆ.ಶಿವಕುಮಾರ್ ಆರೋಪಕ್ಕೆ ಕೇರಳ ಸರ್ಕಾರ ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ಯಾಗ ರಾಜ್ಯದಲ್ಲಿ ನಡೆಯುತ್ತಿಲ್ಲ ಎಂದು ತಿಳಿಸಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪದ ಬೆನ್ನಲ್ಲೇ ಕೇರಳ ಸರ್ಕಾರ ತನಿಖೆಗೆ ಆದೇಶ ನೀಡಿತ್ತು. ಶತ್ರು ಭೈರವಿ ಯಾಗ ನಡೆದಿದೆಯೇ? ಎಂಬ ಬಗ್ಗೆ ತನಿಖಾ ತಂಡ ಸಮಗ್ರ ಮಾಹಿತಿ ಕಲೆಹಾಕಿ ಕೇರಳ ಡಿಜಿಪಿಗೆ ವರದಿ ನೀಡಿದೆ. ವರದಿಯಲ್ಲಿ ಯಾವುದೇ ಪ್ರಾಣಿಬಲಿ, ಯಾಗ ನಡೆದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಕಣ್ಣೂರು, ತಳಿಪರಂಬ ಸೇರಿದಂತೆ ಕೇರಳದ ಹಲವೆಡೆ ತನಿಖಾ ತಂಡ ಪರಿಶೀಲನೆ ನಡೆಸಿದ್ದು, ಎಲ್ಲಿಯೂ ಶತ್ರು ಭೈರವಿ ಯಾಗ ನಡೆದಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ.