
ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿಯೂ ಇಬ್ಬರು ನಾಯಕರು ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸದೇ ದೂರ ಉಳಿದಿದ್ದಾರೆ, ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಈ ಎಲ್ಲಾ ಬೆಳವಣಿಗಳ ನಡುವೆ ಇಬ್ಬರು ಬಿಜೆಪಿ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಆಗಮಿಸಿದ ಶಾಸಕರು, ಡಿ.ಕೆ.ಶಿವಕುಮಾರ್ ಜೊತೆ ಸಮಾಲೋಚನೆ ನಡೆಸಿದ್ದು, ಇನ್ನಷ್ಟು ಕುತೂಹಲ ಮೂಡಿದೆ.