
ಹಾವೇರಿ: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಜನಜಜಂಗುಳಿ ಏರ್ಪಟ್ಟಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಾರಿನಿಂದ ಇಳಿಯುತ್ತಿದ್ದಂತೆ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಡಿ.ಕೆ.ಶಿವಕುಮಾರ್ ಹೆಗಲಮೇಲೆ ಕೈಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಮುಖಂಡನಿಗೆ ಕಪಾಳಮೋಕ್ಷ ಮಾಡಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕಾಂಗ್ರೆಸ್ ಮುಖಂಡನನ್ನು ತಡೆದು ದೂರ ಕಳುಹಿಸಿದ್ದಾರೆ. ಕಳೆದ ರಾತ್ರಿ ಸವಣೂರಿನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.