ಚೆನ್ನೈ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ತಮಿಳುನಾಡಿನ ಕುಂಭಕೋಣಂನ ಶ್ರೀ ಮಹಾ ಪ್ರತ್ಯಂಗಿರಾ ದೇವಿ ದೇಗುಲದಲ್ಲಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಬಿಜೆಪಿ ಸರ್ಕಾರ ಇಲ್ಲದ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ನಾವು ನೀಡುವ ತೆರಿಗೆಗೆ ತಕ್ಕನಾಗಿ ನಮಗೆ ಅನುದಾನ ಬರುತ್ತಿಲ್ಲ. ಈ ವಿಚಾರದಲ್ಲಿ ನಾವೆಲ್ಲರೂ ಒಟ್ಟಿಗೆ ಹೋರಾಟ ಮಾಡಬೇಕಿದೆ ಎಂದರು.