ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಆರೋಪದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿಯೇ ಇತ್ಯರ್ಥ ಮಾಡಿಕೊಳ್ಳುವಂತೆ ತಿಳಿಸಿದೆ.
ಡಿ.ಕೆ.ಶಿವಕುಮಾರ್ ತಮ್ಮ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಈ ಹಿಂದೆ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿಯೇ ಇತ್ಯರ್ಥಪಡಿಸಿಕೊಳ್ಳಲು ಸೂಚನೆ ನೀಡಿದೆ.