
ಬೆಂಗಳೂರು: ನಮಗೆ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಕೆಲವರು ಪಕ್ಷ ತೊರೆಯುತ್ತಿದ್ದಾರೆ. ಮೈತ್ರಿಗೆ ವಿರೋಧಿಸಿ ಬಿಜೆಪಿ, ಜೆಡಿಎಸ್ ನಿಂದ ಹೊರಬರುತ್ತಿದ್ದಾರೆ. ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದರು.
ಮೂವರು ಮಾಜಿ ಶಾಸಕರು ಕಾಂಗ್ರೆಸ್ ಸೇರುತ್ತೇವೆ ಎಂದು ಹೇಳುತ್ತಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೂ ಹಲವರು ಕಾಂಗ್ರೆಸ್ ಸೇರುವ ಆಸಕ್ತಿ ತೋರಿದ್ದಾರೆ. ಸ್ಥಳೀಯ ಚುನಾವಣೆ, ಕಾರ್ಪೊರೇಷನ್ ಚುನವಣೆ ಸಮೀಪಿಸುತ್ತಿದೆ. ಹಾಗಾಗಿ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದರು.