ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕನ್ನಡಪರ ಸಂಘಟನೆಗಳು, ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಸುದ್ದಿಗಾರರೊಂದಿಗೆ ಮತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ. ಸಂಕಷ್ಟದ ಸೂತ್ರದ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.
ಬಂದ್ ಮಾಡುವ ಅಗತ್ಯವಿರಲಿಲ್ಲ. ಇಂದು ನಡೆಯಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ. ರಾಜ್ಯದ ಪರವಾಗಿ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ತಜ್ಞರ ಸಭೆ ಕರೆದಿದ್ದಾರೆ. ಕಾವೇರಿ ನದಿ ವಿಚಾರವಾಗಿ ವಾದ ಮಂಡಿಸಿದ ಎಲ್ಲರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಸಂಕಷ್ಟ ಸೂತ್ರದ ಬಗ್ಗೆ ಚರ್ಚೆಯಾದ ಬಳಿಕ ನಾವು ಕೇಂದ್ರ ಹಾಗೂ ಸುಪ್ರೀಂ ಕೋರ್ಟ್ ಗೂ ಮನವಿ ಮಾಡುತ್ತೇವೆ ಎಂದು ಹೇಳಿದರು.