ಬೆಂಗಳೂರು: ಚುನಾವಣೆಯಲ್ಲಿ ರಾಜ್ಯದ ಜನರು ತೀರ್ಪು ನೀಡಿಯಾಗಿದೆ. ನಾವು ಅಧಿಕಾರಕ್ಕೆ ಬಂದಿದ್ದೇವೆ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜರಕಿಹೊಳಿ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ರಾಜ್ಯದ ಜನ ಚುನಾವಣೆಯಲ್ಲಿ ಏನು ತೀರ್ಪು ನೀಡಬೇಕೋ ನೀಡಿದ್ದಾರೆ. ಯಾರಿಗೂ ಉತ್ತರಿಸುವ ಅಗತ್ಯವಿಲ್ಲ. ನಮಗೆ ಮಾಡಲು ಅನೇಕ ಕೆಲಸಗಳಿವೆ. ಆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಬಿಜೆಪಿ ಈಗ ಆಪರೇಷನ್ ಕಮಲದ ಬಗ್ಗೆ ಚಕಾರವೆತ್ತಿಲ್ಲ. ಆದಾರೂ ಡಿ.ಕೆ.ಶಿವಕುಮಾರ್ ಹಾಗೂ ಕಂಪನಿ ಆರೋಪ ಮಾಡುತ್ತಿದೆ. ಶೀಘ್ರದಲ್ಲಿಯೇ ಡಿ.ಕೆ.ಶಿವಕುಮಾರ್ ಮಾಜಿ ಮಂತ್ರಿಯಾಗಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಕಿಡಿಕಾರಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಮಗೆ ಮಾಡಲು ಕೆಲಗಳಿವೆ ಎಂದು ತಿರುಗೇಟು ನೀಡಿದ್ದಾರೆ.